Saturday, June 13, 2026
spot_imgspot_img
spot_imgspot_img

ಮತಗಳ್ಳತನ ಆರೋಪ- ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ; ರಾಹುಲ್‌, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ಪೊಲೀಸರ ವಶಕ್ಕೆ

- Advertisement -
- Advertisement -

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್‌ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.

ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್‌ ತಳ್ಳಲು ಮುಂದಾದರು.

ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆ ಎಲ್ಲರನ್ನೂ ವಶಕ್ಕೆ ಪಡೆಯಲಾಯಿತು. ನಾಲ್ಕೈದು ಬಸ್‌ಗಳನ್ನು ನಿಯೋಜಿಸಿ, ಬ್ಯಾರಿಕೇಡ್ ಹಾಕಿ ಪೊಲೀಸರು ತಡೆಹಾಕಿದ್ದರು.

- Advertisement -

Related news

error: Content is protected !!