Tuesday, May 7, 2024
spot_imgspot_img
spot_imgspot_img

14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯ- ರಾಜ್ಯದಲ್ಲಿ ಶೇ.64.57ರಷ್ಟು ಮತದಾನ

- Advertisement -G L Acharya panikkar
- Advertisement -
This image has an empty alt attribute; its file name is shri-energy-solar-667x1024.jpeg

ರಾಜ್ಯದಲ್ಲಿನ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.64.57ರಷ್ಟು ಮತದಾನ ಆಗಿದೆ. ಅತೀ ಹೆಚ್ಚು ಮತದಾನ ಶೇ.74.87ರಷ್ಟು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಆಗಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ ಶೇ.49.37ರಷ್ಟು ಮತದಾನವಾಗಿದೆ.

ಸಂಜೆ 6 ಗಂಟೆ ವೇಳೆಗೆ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ, ಬೂತ್‌ಗಳಲ್ಲಿ ಇವಿಎಂ ಯಂತ್ರಗಳ ಪವರ್ ಬಟನ್ ಆಫ್ ಮಾಡಿದ ಮತಗಟ್ಟೆ ಅಧಿಕಾರಿಗಳು ಅವುಗಳನ್ನು ಸ್ಟ್ರಾಂಕ್‌ ರೂಮಿನಲ್ಲಿರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ದಕ್ಷಿಣ ಕನ್ನಡ-ಶೇ.72.30, ಉಡುಪಿ ಚಿಕ್ಕಮಗಳೂರು-ಶೇ.72.69, ಹಾಸನ-ಶೇ.72.13, ಮಂಡ್ಯ-ಶೇ.74.87, ಕೋಲಾರ-ಶೇ.73.25, ತುಮಕೂರು-ಶೇ.72.10, ಚಿಕ್ಕಬಳ್ಳಾಪುರ-ಶೇ.71.85, ಚಾಮರಾಜನಗರ- ಶೇ.69.86, ಚಿತ್ರದುರ್ಗ-ಶೇ.67.52, ಮೈಸೂರು-ಶೇ.67.55, ಬೆಂಗಳೂರು ಗ್ರಾಮಾಂತರ-ಶೇ.61.78, ಬೆಂಗಳೂರು ಉತ್ತರ-ಶೇ.51.51, ಬೆಂಗಳೂರು ಕೇಂದ್ರ-ಶೇ.49.77 ಹಾಗೂ ಬೆಂಗಳೂರು ದಕ್ಷಿಣ-ಶೇ.49.37ರಷ್ಟು ಮತದಾನವಾಗಿದೆ.

- Advertisement -

Related news

error: Content is protected !!