

ವಿಟಿವಿ ಮಾಧ್ಯಮದಲ್ಲಿ ಪ್ರಕಟವಾದ ವರದಿಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತಮ್ಮ ಫೇಸ್ ಬುಕ್ ಖಾತೆಯ ಮೂಲಕ ವಿಟಿವಿ ವರದಿಯ ಪೋಸ್ಟರ್ ಹಾಕಿ ಪ್ರತಿಕ್ರಿಯೆ ನೀಡಿದ್ದಾರೆ. ನೈಜ, ನಿಖರ, ನಿರ್ಭೀತ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಟಿವಿ ವೆಬ್ ಪೋರ್ಟಲ್ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಕೂಡ ತಮ್ಮಿಂದಾಗುವ ಫಲಶ್ರುತಿಯನ್ನು ವರದಿ ಮೂಲಕ ನೀಡಿರುತ್ತದೆ. ಸಮಾಜದಲ್ಲಿ ನಡೆಯುವ ಎಲ್ಲಾ ಅನಾಹುತ, ಕೃತ್ಯ ಘಟನೆಗಳನ್ನು ಯಾವುದೇ ಅಡೆತಡೆಗಳಿಗೆ ಬಗ್ಗದೆ, ಮುಲಾಜಿಲ್ಲದೆ ವರದಿ ಪ್ರಕಟಿಸುತ್ತಾ ರಾಜ್ಯಾದ್ಯಂತ ಹೆಸರುವಾಸಿಯಾಗಿದೆ.
ಉಡುಪಿಯಲ್ಲಿ ಮೀನು ಕಳ್ಳತನ ಆರೋಪ: ಮಾರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ ಎಂಬ ಘಟನೆಯ ಬಗ್ಗೆ ಮಾರ್ಚ್ 19 ರಂದು ವಿಟಿವಿ ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು. ಈ ಘಟನೆಯ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಟಿವಿ ವರದಿ ಪರಿಶೀಲಿಸಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡದ್ದಾರೆ. ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ “ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು.ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ.ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.








