Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಒಮ್ನಿಗೆ ವ್ಯಾಗನರ್ ಕಾರು ಡಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆಗೆ ಗಂಭೀರ ಗಾಯ…!

- Advertisement -G L Acharya panikkar
- Advertisement -

ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ಸಂಭವಿಸಿದೆ.

ಕಾರು ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ನೆಗೆದು ಬಿದ್ದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳು ಮಹಿಳೆ ಸ್ಥಳೀಯ ಅಂಜಲಿ ಶೆಣೈ ಎಂದು ಗುರುತಿಸಲಾಗಿದ್ದು ಅಪಘಾತದ ಬಳಿಕ ಕಾರು ಚಾಲಕ ಕಾರು ಸಮೇತ ಪರಾರಿಯಾಗಿದ್ದ ಬಳಿಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ರಸ್ತೆಬದಿಯಲ್ಲಿದ್ದ ಮಾರುತಿ ಒಮಿನಿಗೂ ಕಾರು ಗುದ್ದಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

Related news

error: Content is protected !!