Thursday, July 23, 2026
spot_imgspot_img
spot_imgspot_img

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಓಮ್ನಿ ಕಾರು; ಚಾಲಕ ಗಂಭೀರ…!

- Advertisement -
- Advertisement -

ಮಾಣಿ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಮಾರುತಿ ವ್ಯಾನ್ ಹೆದ್ದಾರಿ ಬದಿಯ ಹೊಂಡಕ್ಕೆ ಜಿಗಿದು ಮೂರು ಪಲ್ಟಿ ಹೊಡೆದಿದೆ.

ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು ಚಾಲಕ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾನ್ ಒಳಗಡೆ ಸಿಲುಕಿಕೊಂಡಿದ್ದ ಚಾಲಕನನ್ನು ತಕ್ಷಣವೇ ಹೊರಕ್ಕೆ ತೆಗೆದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಶಾಲನಗರ ಮೂಲದ ಕುಟುಂಬವೊಂದು ಮಂಗಳೂರಿನಿಂದ ಊರಿಗೆ ಹೋಗುತ್ತಿದ್ದ ಸಂದರ್ಭ ಕೊಡಾಜೆ ಸಮೀಪ ತಾಂತ್ರಿಕ ವೈಫಲ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!