- Advertisement -
- Advertisement -



ವೇಣೂರು: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ. 40/2015 ಕಲಂ 448, 354(A)(2), 506 ಐಪಿಸಿ ಹಾಗೂ 11, 12 ಪೋಕ್ಸೋ ಕಾಯ್ದೆ 2012 ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ವೇಣೂರು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿ ಬೆಳ್ತಂಗಡಿಯ ಯೋಗೀಶ್ ಪೂಜಾರಿ (35) ಎಂಬಾತನು ಪ್ರಕರಣ ದಾಖಲಾದ ನಂತರದಿಂದಲೇ ತಲೆಮರೆಸಿಕೊಂಡಿದ್ದು, ವಿಶೇಷ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಾಗನೂರು ಗ್ರಾಮದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -








