- Advertisement -
- Advertisement -




ಕೇರಳದ ಎರಡು ಅಸೆಂಬ್ಲಿ ಸ್ಥಾನಗಳು ಮತ್ತು ಹೈ-ಪ್ರೊಫೈಲ್ ವಯನಾಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಮಂಗಳವಾರ 15 ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಮತ್ತು 2 ಲೋಕಸಭೆ ಸ್ಥಾನಗಳಿಗೆ ಎರಡು ಹಂತದ ಉಪಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ.
ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆಯಾಗಿದೆ.
ಮತ್ತೊಂದೆಡೆ, ಮಹಾರಾಷ್ಟ್ರದ ನಾಂದೇಡ್ ಸಂಸದೀಯ ಕ್ಷೇತ್ರದಲ್ಲಿ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ನಡೆಯುವ ದಿನಾಂಕವಾದ ನವೆಂಬರ್ 20ರಂದು ಉಪಚುನಾವಣೆ ನಡೆಸಲಿದೆ.ಎರಡೂ ಕ್ಷೇತ್ರಗಳ ಮತ ಎಣಿಕೆಯು ನವೆಂಬರ್ 23ರಂದು ನಡೆಯಲಿದೆ.
- Advertisement -








