Tuesday, June 9, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಸೇರಿದಂತೆ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ-ಮುಂದಿನ 3 ದಿನಗಳ ಕಾಲ ಭಾರೀ ಮಳೆ

- Advertisement -
- Advertisement -

ಬೆಂಗಳೂರು: ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ವಾಯುಭಾರ ಕುಸಿತ ಮುಂಗಾರು ಮಳೆಯ ಅಬ್ಬರ ಹೆಚ್ಚಿಸಿದೆ. ಇದರ ನಡುವೆ ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆ ಹಿನ್ನೆಲೆ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್:-​ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್ ಇದ್ದರೆ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ್​ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಲೇ ಇದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಬಳಿ ಭೂಕುಸಿತ ಉಂಟಾದ ಪರಿಣಾಮ ಒಂದೇ ದಿನ ನಾಲ್ವರು ಸಾವನ್ನಪ್ಪಿದ್ರು. ಗುಡ್ಡ ಕುಸಿದ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಜನರು ಎಚ್ಚರವಾಗಿರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಇಂದು ಕೂಡ ರೆಡ್ ಅಲರ್ಟ್ ಘೋಷಿಸಿದೆ. 115 ಮಿಮೀ ನಿಂದ 204 ಮಿಮೀ ವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

- Advertisement -

Related news

error: Content is protected !!