Sunday, May 12, 2024
spot_imgspot_img
spot_imgspot_img

ಕೋವಿಡ್ 19 ಹೊರತುಪಡಿಸಿ ಬೇರೆಲ್ಲಾ ರೋಗಿಗಳು ವೆನ್ಲಾಕ್ ನಿಂದ ಶೀಘ್ರವೇ ಸ್ಥಳಾಂತರ ಸಾಧ್ಯತೆ

- Advertisement -G L Acharya panikkar
- Advertisement -

ಮಂಗಳೂರು: ದ.ಕ. ಜಿಲ್ಲೆಯ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯನ್ನು ಈ ಬಾರಿಯೂ ಪೂರ್ಣವಾಗಿ ಕೊರೊನಾ ರೋಗಿಗಳ ಆರೈಕೆಗೆ ಮಾತ್ರ ಮೀಸಲಿಡುವ ಬಗ್ಗೆ ದ.ಕ. ಜಿಲ್ಲಾಡಳಿತ ಚಿಂತನೆ ನಡೆಸಿದೆ.

ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇತರ ಕಾಯಿಲೆಗಳ ರೋಗಿಗಳನ್ನು ತಾಲೂಕು ಆಸ್ಪತ್ರೆ ಅಥವಾ ಖಾಸಗಿ ಮೆಡಿಕಲ್ ಆಸ್ಪತ್ರೆಗಳಿಗೆ ದಾಖಲಿಸುವ ಸಂಬಂಧ ಚರ್ಚೆ ಆರಂಭವಾಗಿದ್ದು, ಶೀಘ್ರದಲ್ಲಿ ಈ ಕುರಿತಂತೆ ಅಂತಿಮ ತೀರ್ಮಾನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು, ವೆಂಟಿಲೇಟರ್, ಸಾಮಾನ್ಯ ಬೆಡ್ ಸಹಿತ ಒಟ್ಟು 905 ಬೆಡ್‍ಗಳು ಲಭ್ಯವಿವೆ. ಈ ಪೈಕಿ ಕೊರೊನಾ ಸೋಂಕಿತರಿಗಾಗಿ ಸದ್ಯ 310 ಬೆಡ್‍ಗಳನ್ನು ಮೀಸಲಿಡಲಾಗಿದೆ. ಉಳಿದಂತೆ ಸುಮಾರು 400 ಬೆಡ್‍ಗಳಲ್ಲಿ ಕೊರೊನಾ ಅಲ್ಲದ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವರ್ಷ ಮಾರ್ಚ್‍ನಲ್ಲಿ ಕೊರೊನಾ ಸಂದರ್ಭ ದ.ಕ. ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಚಿಕಿತ್ಸೆಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗಿತ್ತು. ಆಗ ಆಸ್ಪತ್ರೆಯಲ್ಲಿ ಬೇರೆ ಬೇರೆ ಕಾಯಿಲೆಗಳ ಚಿಕಿತ್ಸೆಗಾಗಿ ಒಳರೋಗಿಗಳಾಗಿ ದಾಖಲಾಗಿರುವ ಸುಮಾರು 218 ರೋಗಿಗಳನ್ನು ಹಂತ ಹಂತವಾಗಿ ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿತ್ತು. ಹೊರರೋಗಿ ಚಿಕಿತ್ಸೆಗೆ ಬರುವವರನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿತ್ತು. ಈ ಬಾರಿಯೂ ಇದೇ ರೀತಿ ನಿರ್ಧಾರ ಕೈಗೊಳ್ಳಬೇಕಾದ ಆವಶ್ಯಕತೆ ಎದುರಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಈ ಬಗ್ಗೆ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ| ಸದಾಶಿವ ಶ್ಯಾನ್‍ಬೋಗ್ ಅವರು ಮಾತನಾಡಿ ಕಳೆದ ವರ್ಷ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ಅಲ್ಲದೆ ಚಿಕಿತ್ಸೆ ಪಡೆ ಯುತ್ತಿದ್ದ ರೋಗಿಗಳನ್ನು ಇತರ ಆಸ್ಪತ್ರೆ ಗಳಿಗೆ ಸ್ಥಳಾಂತರಿಸಲಾಗಿತ್ತು. ಆದರೆ, ಈ ಬಾರಿ ಈ ಬಗ್ಗೆ ನಿರ್ಧಾರ ಆಗಿಲ್ಲ. ಸದ್ಯ ವೆನ್ಲಾಕ್ ನಲ್ಲಿ ಕೊರೊನಾ ಅಲ್ಲದ ಇತರ ತುರ್ತು ಹಾಗೂ ಗಂಭೀರ ಸಮಸ್ಯೆಗಳಿಗೆ ಮಾತ್ರ ದಾಖಲಾತಿ ಮಾಡಲಾಗುತ್ತಿದೆ ಎಂದರು.

driving
- Advertisement -

Related news

error: Content is protected !!