Thursday, September 12, 2024
spot_imgspot_img
spot_imgspot_img

*ವೆನ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚುವರಿ 300  ಆಕ್ಸಿಜನ್ ಬೆಡ್ – ಶಾಸಕ ಕಾಮತ್*

- Advertisement -G L Acharya panikkar
- Advertisement -

ಮಂಗಳೂರು:- ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಆಕ್ಸಿಜನ್ ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್ ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್ ಸಂವಾದದ ನಂತರ ಮಾತನಾಡಿದ ಅವರು,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಚರ್ಚೆಯ ಸಂದರ್ಭ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್ ಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಬೆಡ್ ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್, ಸಮುದಾಯ ಭವನ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೆಡ್’ಗಳಿಗೂ ಆಕ್ಸಿಜನ್  ಸಂಪರ್ಕ ಕಲ್ಪಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ 150 ಆಕ್ಸಿಜನ್ ಬೆಡ್’ಗಳು ಲಭ್ಯವಿದೆ. ಹೆಚ್ಚುವರಿ 300 ಬೆಡ್ ಗಳಿಗೆ ಆಕ್ಸಿಜನ್ ಸಂಪರ್ಕ ಜೋಡಿಸುವ ಪ್ರಕ್ರಿಯೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಆಕ್ಸಿಜನ್ ಬೆಡ್ ಕೊರತೆ ಉದ್ಭವಿಸದಂತೆ ತಡೆಗಟ್ಟಲು ಈ ಕ್ರಮ ಪರಿಣಾಮಕಾರಿಯಾಗಲಿದೆ ಎಂದಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರೊಂದಿಗೆ  ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಹರೀಶ್ ಪೂಂಜ, ಜಿಲ್ಲಾಧಿಕಾರಿ,ಅಪರ ಜಿಲ್ಲಾಧಿಕಾರಿ, ಉಪ ಆಯುಕ್ತರು, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ವೈದ್ಯಕೀಯ ಅಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!