Wednesday, June 10, 2026
spot_imgspot_img
spot_imgspot_img

ಪಶ್ಚಿಮ ಬಂಗಾಳ: ನಕಲಿ ಸಹಿ ವಿವಾದ-ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ಅಭಿಷೇಕ್ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ

- Advertisement -
- Advertisement -

ಕೊಲ್ಕತ್ತಾ: ಶಾಸಕರ ನಕಲಿ ಸಹಿ ವಿವಾದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಐಡಿ ಪೊಲೀಸರ ತಂಡ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ಕೊಲ್ಕತ್ತಾದ ಕಾಲಿಘಾಟ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಸಂಕೀರ್ಣದಲ್ಲಿರುವ ಪಕ್ಷದ ಕಚೇರಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕ್ಯಾಮಕ್ ಸ್ಟ್ರೀಟ್ ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಸೋವಂದೇವ್ ಚಟ್ಟೋಪಾಧ್ಯಾಯ ಅವರನ್ನು ಟಿಎಂಸಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೇ 6ರ ನಿರ್ಣಯಕ್ಕೆ ಸಂಬಂಧಿಸಿ ಹೊಸದಾಗಿ ಚುನಾಯಿತರಾದ ಕೆಲ ಟಿಎಂಸಿ ಶಾಸಕರ ಸಹಿಯನ್ನು ನಕಲಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಈ ತನಿಖೆಯನ್ನು ನಡೆಸಲಾಗಿದೆ. ದಾಳಿಯ ಸಮಯದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಭಿಷೇಕ್ ಬ್ಯಾನರ್ಜಿ ಇಬ್ಬರೂ ದಿಲ್ಲಿಯಲ್ಲಿದ್ದರು. ಸುಮಾರು ಮೂರು ಗಂಟೆಗಳ ಕಾಲ ದಾಳಿ ನಡೆದಿದ್ದು, ಪರಿಶೀಲನೆ ವೇಳೆ ಯಾವುದೇ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿಲ್ಲ ಎಂದು ತಿಳಿದು ಬಂದಿದೆ. ಟಿಎಂಸಿ ನಾಯಕರು ಈ ಕ್ರಮವನ್ನು ರಾಜಕೀಯ ದ್ವೇಷದ ನಡವಳಿಕೆ ಎಂದು ಖಂಡಿಸಿದ್ದಾರೆ.

- Advertisement -

Related news

error: Content is protected !!