Wednesday, June 17, 2026
spot_imgspot_img
spot_imgspot_img

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತ್ಯು

- Advertisement -
- Advertisement -

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತಪಟ್ಟ ಘಟನೆ ಕವತ್ತಾರು ಕೊರಗಜ್ಜನ ಗುಡಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಮೃತ ಸವಾರನನ್ನು ಸಂತೋಷ್ ಎಂದು ಗುರುತಿಸಲಾಗಿದೆ.

ಕರ್ನಿರೆ ಕಡೆಯಿಂದ ಮೂಲ್ಕಿ ಕಡೆಗೆ ಬುಲೆಟ್ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ಎದುರಿನಿಂದ ಬರುತ್ತಿದ್ದ ಟೆಂಪೊವನ್ನು ನೋಡಿ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಬೈಕ್ ಸ್ಕಿಡ್ ಆಗಿದ್ದು, ಬೈಕ್ ಬೀಳುತ್ತಿದ್ದಂತೆ ಸಂತೋಷ್ ಬೈಕ್ ಸಮೇತ ಡಾಮಾರು ರಸ್ತೆಗೆ ಬಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಟೆಂಪೊ ಹೆಡ್ ಲೈಟ್ ತಲೆಗೆ ಬಡಿದು ಗಂಭೀರ ಗಾಯಗೊಂಡರು.
ತಕ್ಷಣವೇ ಅವರನ್ನು ಸುರತ್ಕಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸಾಗಿಸುವ ವೇಳೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಟ್ರಾಫಿಕ್ ಉತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!