Sunday, June 29, 2025
spot_imgspot_img
spot_imgspot_img

ಬಂಟ್ವಾಳ : ಮನೆಮಂದಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು

- Advertisement -
- Advertisement -

ಬಂಟ್ವಾಳ : ದಂಪತಿ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದ ವೇಳೆ ಒಳ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಎಗರಿಸಿದ ಘಟನೆ ಇರಾ ಗ್ರಾಮದಲ್ಲಿ ನಡೆದಿದೆ.

ಇರಾ ಗ್ರಾಮದ ನಿವಾಸಿ ವನಿತಾ ಎಂಬವರ ಮನೆಯಲ್ಲಿ ಈ ಕಳವು ಕೃತ್ಯ ನಡೆದಿದ್ದು, ಇವರು ಹಾಗೂ ಪತಿ ಬೆಳಿಗ್ಗೆ ಮನೆಯ ಮುಖ್ಯ ಬಾಗಿಲಿಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು. ಸಂಜೆ ವೇಳೆ ವನಿತಾ ಅವರು ಕೆಲಸದಲ್ಲಿರುವಾಗ ಅವರ ಅಕ್ಕ ಕಾಲ್‌ ಮಾಡಿ ಮನೆಯ ಎದುರಿನ ಬಾಗಿಲಿನ ಬೀಗವನ್ನು ಯಾರೋ ಮುರಿದು ಕಳ್ಳರು ನುಗ್ಗಿರುವಂತೆ ಕಂಡು ಬರುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ತಕ್ಷಣ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲಿಗೆ ಹಾಕಿದ ಬೀಗವನ್ನು ತೆರೆದಿರುವುದು ಕಂಡು ಬಂದಿರುತ್ತದೆ. ಬಳಿಕ ಮನೆಯ ಒಳಗೆ ಹೋಗಿ ನೋಡಿದಾಗ ರೂಮ್ ನಲ್ಲಿದ್ದ ಕಪಾಟನ್ನು ಯಾರೋ ಕಳ್ಳರು ಸಾಧನದಿಂದ ತೆರೆದಿದ್ದು, ಅದರಲ್ಲಿದ್ದ ಬಟ್ಟೆ ಬರೆ ಹಾಗೂ ಇನ್ನಿತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿತ್ತು. ಕಪಾಟಿನ ಸೇಫ್ ಲಾಕರ್ ನಲ್ಲಿದ್ದ ಸುಮಾರು 4.14 ಲಕ್ಷ ರೂಪಾಯಿ ಮೌಲ್ಯದ ಒಟ್ಟು 69 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!