Saturday, May 11, 2024
spot_imgspot_img
spot_imgspot_img

ರಸ್ತೆ ದಾಟುತ್ತಿದ್ದ ವೇಳೆ ಬೈಕ್​ ಡಿಕ್ಕಿ – ಅಂಧ ದಂಪತಿಯ ದುರಂತ ಅಂತ್ಯ

- Advertisement -G L Acharya panikkar
- Advertisement -

ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ- ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಶ್ರೀಧರ್ (52) ಹಾಗೂ ಅರ್ಚನಾ (35) ಮೃತ ದಂಪತಿ.

6 ತಿಂಗಳ ಹಿಂದಿನಿಂದ ಯಂಟಗಾನಹಳ್ಳಿಯಲ್ಲಿ ವಾಸವಾಗಿದ್ದ ದಂಪತಿಗೆ ಕಣ್ಣು ಕಾಣುತ್ತಿರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೆಂದು ಇಬ್ಬರೂ ಕೈಕೈ ಹಿಡಿದು ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ದಂಪತಿಗೆ ಡಿಕ್ಕಿಹೊಡೆದಿದೆ.
ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!