Monday, June 22, 2026
spot_imgspot_img
spot_imgspot_img

ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಧು ಸಾವು..!

- Advertisement -
- Advertisement -

ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉತ್ತರಾಖಂಡದ ಡೆಹ್ರಾಡೂನ್​​ನಲ್ಲಿ ನಡೆದಿದೆ.

ಮೃತಪಟ್ಟ ಯುವತಿ ಶ್ರೇಯಾ ಜೈನ್(28) ಎಂದು ಗುರುತಿಸಲಾಗಿದೆ.

ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟೊಂದನ್ನು ಮದುವೆಯ ಸಂಭ್ರಮಾಚರಣೆಗಾಗಿ ಬುಕ್​​​ ಮಾಡಿತ್ತು. ಅದರಂತೆ ಮದುವೆಗೂ ಎರಡು ದಿನಗಳ ಹಿಂದೆ ರೆಸಾರ್ಟ್​​​ಗೆ ಬಂದಿದ್ದಾರೆ

ಮದುವೆಯ ಹಿಂದಿನ ದಿನ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹಂದಿ ಕಾರ್ಯಕ್ರಮ ಆರಂಭವಾಗಿದೆ. ಆದರೆ ವಿಧಿ ವಿಪರ್ಯಾಸವೆಂಬಂತೆ ವಧು ಮೆಹಂದಿ ದಿನ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಯುವತಿ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

- Advertisement -

Related news

error: Content is protected !!