Tuesday, May 21, 2024
spot_imgspot_img
spot_imgspot_img

ಖೋ ಖೋ ಆಡುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು

- Advertisement -G L Acharya panikkar
- Advertisement -

ಶಾಲೆಯಲ್ಲಿ ವಿದ್ಯಾರ್ಥಿಗಳು ಖೋ ಖೋ ಆಟ ಆಡುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್ ಮೃತಪಟ್ಟ ಬಾಲಕ. ವಿದ್ಯಾರ್ಥಿ ಶಶಾಂಕ್ ಶಾಲಾ ಅವಧಿ ಮುಗಿದ ಬಳಿಕ ಖೋ ಖೋ ಅಭ್ಯಾಸ ಮಾಡಲು ಹೋಗಿದ್ದಾನೆ. ಖೋ ಖೋ ಆಡುತ್ತಿದ್ದ ಸಂದರ್ಭ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ವಿದ್ಯಾರ್ಥಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!