Tuesday, May 7, 2024
spot_imgspot_img
spot_imgspot_img

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ

- Advertisement -G L Acharya panikkar
- Advertisement -

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಪ್ರಧಾನ ಮಂತ್ರಿ ಪಿ.ಎಂ. ಸ್ವನಿಧಿ ಯೋಜನೆಯಡಿ ಈವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗಿದೆ.

ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು, ಬ್ಯಾಂಕ್ ಸಾಲ ವಿತರಿಸಲು, ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಮಂಜೂರಾತಿ ಹಾಗೂ ನಗದು ಬಿಡುಗಡೆ ಮತ್ತು ಸ್ವ-ನಿಧಿಸವೃದ್ಧಿ ಕಾರ್ಯಕ್ರಮದಡಿ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಕುಟುಂಬ ಸದಸ್ಯರಿಗೆ ಸಾಮಾಜಿಕ ಭದ್ರತೆಯ ಯೋಜನೆ ಒದಗಿಸುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯಲಿದೆ.

ಪ್ರಥಮ ಹಂತದಲ್ಲಿ 10 ಸಾವಿರ ರೂ., ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯ ಮತ್ತು ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20 ಸಾವಿರ ರೂ. ಹಾಗೂ ತೃತೀಯ ಹಂತದಲ್ಲಿ 50 ಸಾವಿರ ರೂ.ಬ್ಯಾಂಕ್ ಸಾಲ ಸೌಲಭ್ಯ ದೊರೆಯುತ್ತದೆ. ಡಿಜಿಟಲ್ ವ್ಯವಹಾರ ಮಾಡುವ ಬೀದಿ ಬದಿ ವ್ಯಾಪಾರಿಗಳಿಗೆ ವಾರ್ಷಿಕ 1,200 ರೂ. ಕ್ಯಾಶ್ ಬ್ಯಾಕ್ ದೊರೆಯಲಿದೆ. ಎಲ್ಲ ಬ್ಯಾಂಕುಗಳು ಮತ್ತು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಕಿರು ಸಾಲ ಮೇಳ ನಡೆಯಲಿದ್ದು ನಗರದ ಬೀದಿ ಬದಿ ವ್ಯಾಪಾರಿಗಳು ಆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೌಲಭ್ಯ ಪಡೆಯುವಂತೆ ವಿಟ್ಲ ಪ.ಪಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!