Monday, May 6, 2024
spot_imgspot_img
spot_imgspot_img

ಪತಿಯ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ..!

- Advertisement -G L Acharya panikkar
- Advertisement -

ಪತ್ನಿಯಿಂದಲೇ ಪತಿಯನ್ನು ಬರ್ಬರ ಹತ್ಯೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಉಮೇಶ್ ದಾಮಿ (27) ಪತ್ನಿ ಮನಿಷಾ ದಾಮಿ ಎಂದು ಗುರುತಿಸಲಾಗಿದೆ.

ಈ ದಂಪತಿ ಕಾಲೇಜೊಂದರಲ್ಲಿ ಸೆಕ್ಯುರಿಟಿ ಹಾಗೂ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದಂದು ಉಮೇಶ್ ರಾತ್ರಿ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ಮನೆಗೆ ವಾಪಸ್ಸಾಗಿದ್ದ. ಆ ವೇಳೆ ಮನಿಷಾ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಕೋಪಗೊಂಡ ಉಮೇಶ್ ಆಕೆಯ ಜೊತೆಗೆ ಜಗಳವಾಡಿದ್ದಾನೆ.

ಅನೈತಿಕ ಸಂಬಂಧ ಹೊಂದಿರೋ ಬಗ್ಗೆ ಅನುಮಾನದಿಂದ ಪತ್ನಿ ಜೊತೆ ಗಲಾಟೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋದಾಗ ಮನಿಷಾ, ಚಾಕು ತೆಗೆದುಕೊಂಡು ಉಮೇಶ್ ದಾಮಿಗೆ ಇರಿದಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಉಮೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಉಮೇಶ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆರೋಪಿ ಮನಿಷಾಳನ್ನ ಬಂಧಿಸಿ ಹುಳಿಮಾವು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಬಗ್ಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!