Thursday, April 25, 2024
spot_imgspot_img
spot_imgspot_img

ಇನ್ನು ಮುಂದೆ ಡ್ರೈವಿಂಗ್‌ ಟೆಸ್ಟ್‌ ಇಲ್ಲದೆಯೇ ಡಿಎಲ್‌; ಕೇಂದ್ರ ಸರ್ಕಾರ

- Advertisement -G L Acharya panikkar
- Advertisement -

ನವದೆಹಲಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್​ಟಿಒ) ನಡೆಸುವ ಪರೀಕ್ಷೆಗೊಳಗಾಗದೇ ಚಾಲನಾ ಪರವಾನಗಿ (ಡಿಎಲ್) ಪಡೆಯುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ.

ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರಗಳಲ್ಲಿ, ಉತ್ತಮ ಗುಣಮಟ್ಟದ ಕೋರ್ಸ್​ ಪಡೆದವರು ಅಲ್ಲಿ ನಡೆಸುವ ಡ್ರೈವಿಂಗ್ ಟೆಸ್ಟ್​ನಲ್ಲಿ ಉತ್ತೀರ್ಣರಾಗಬೇಕು. ಆಗ ಆರ್​ಟಿಒ ನಡೆಸುವ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದೆ.

ಒಳ್ಳೆಯ ಗುಣಮಟ್ಟದ ಚಾಲನಾ ತರಬೇತಿ ಸಿಗುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಸಾರಿಗೆ ಸಚಿವಾಲಯ ತಿಳಿಸಿದೆ. ಅದೇ ರೀತಿ ಒಳ್ಳೆಯ ತರಬೇತಿ ನೀಡಲು ಬೇಕಾದ ಸೌಲಭ್ಯ, ಚಾಲನಾ ಪರೀಕ್ಷಾ ಟ್ರ್ಯಾಕ್ ಅಳವಡಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!