- Advertisement -
- Advertisement -


ಸುಬ್ರಹ್ಮಣ್ಯ: ವೈಯಕ್ತಿಕ ಕಾರಣಗಳಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಉಡುಪಿ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ರಕ್ಷಿಸಿದ ಘಟನೆ ನ.4ರಂದು ರಾತ್ರಿ ಕುಮಾರಧಾರಾ ಸೇತುವೆ ಬಳಿ ನಡೆದಿದೆ.
ಮಹಿಳೆ ರಾತ್ರಿ ವೇಳೆ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಸಂದರ್ಭದಲ್ಲಿ ಮೊಸಳೆಯೊಂದು ಕಚ್ಚಿ ಸಣ್ಣ ಪ್ರಮಾಣದಲ್ಲಿ ಗಾಯಗೊಳಿಸಿದೆ. ಮಹಿಳೆಯ ಬೊಬ್ಬೆ ಕೇಳಿ ಸಮೀಪದ ಲಾಡ್ಜ್ ನಲ್ಲಿದ್ದ ಸಿಬ್ಬಂದಿ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಮಹಿಳೆಯನ್ನು ರಕ್ಷಿಸಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ, ಮನೆಯವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
- Advertisement -








