Sunday, June 29, 2025
spot_imgspot_img
spot_imgspot_img

ಕಾಪು: ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತ್ಯು..!!

- Advertisement -
- Advertisement -
vtv vitla

ಕಾಪು: ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್‌ನಿಂದ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪು ಗುಡ್ಡೆ ನಿವಾಸಿ ನಿರ್ಮಲಾ (61) ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗುರುವಾರ ಉದ್ಯಾವರದ ಬಿಲ್ಲವ ಮಹಾಜನ ಸಂಘದಲ್ಲಿ ನಡೆದಿದ್ದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ದೂರದ ಸಂಬಂಧಿ ದಿನೇಶ್ ಅವರ ಬೈಕ್‌ನಲ್ಲಿ ಕುಳಿತು ಮನೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಬೈಕ್‌ನಿಂದ ರಸ್ತೆಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ಬಳಿಕ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ಅಲ್ಲಿನ ವೈದ್ಯರು ನಿರ್ಮಲಾ ಅವರ ಬ್ರೈನ್ ಡೆಡ್ ಆಗಿರುವುದಾಗಿ ತಿಳಿಸಿದ್ದು, ಬಳಿಕ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಮೃತರು ಪತಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!