Wednesday, May 15, 2024
spot_imgspot_img
spot_imgspot_img

ಬಂಟ್ವಾಳ: ಹಣ ಡಬ್ಬಲ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿ 21 ಲಕ್ಷ ಹಣ ಕಳೆದುಕೊಂಡ ಮಹಿಳೆ; ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಬಂಟ್ವಾಳ : ಹಣ ಡಬ್ಬಲ್ ಆಗುತ್ತದೆ ಎಂದು ಆ್ಯಪ್ ಒಂದರಲ್ಲಿ ಹಣ ಹೂಡಿಕೆ ಮಾಡಿ ಸುಮಾರು 21 ಲಕ್ಷ ಹಣ ಕಳೆದುಕೊಂಡ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಎಂದು ಗುರುತಿಸಲಾಗಿದೆ. ವೀಟಾ ಮರಿನಾ ಅವರು ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ವೀಟಾ ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಈ ನಡುವೆ ಯಾವುದೇ ಮೊಬೈಲ್ ಆ್ಯಪ್ ನಂಬಿ ಸುಮಾರು 21 ಲಕ್ಷಕ್ಕೂ ಅಧಿಕ ಹಣ ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಅವರು ಪೊಲೀಸರಿಗೂ ದೂರು ನೀಡಿದ್ದರು.

ಈ ನಡುವೆ ವೀಟಾ ಅವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಮಾತ್ರ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು.

ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ.

- Advertisement -

Related news

error: Content is protected !!