Saturday, April 27, 2024
spot_imgspot_img
spot_imgspot_img

ಮಂಗಳೂರು: 14ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

- Advertisement -G L Acharya panikkar
- Advertisement -

ಮಂಗಳೂರು: ಮಹಿಳೆಯೊಬ್ಬರು ಅಪಾರ್ಟ್ಮೆಂಟ್‌ನ 14ನೇ ಮಹಡಿಯಲ್ಲಿರುವ ಮನೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಬಹುಮಹಡಿಗಳ ಅಪಾರ್ಟ್ ಮೆಂಟ್ ವೊಂದರ 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ ನಡೆಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!