Tuesday, April 23, 2024
spot_imgspot_img
spot_imgspot_img

ಮಹಿಳಾ ದಿನಾಚರಣೆಗೆ ವಿಶೇಷವಾಗಿ ಶುಭಕೋರಿದ ಪ್ರಧಾನಿ

- Advertisement -G L Acharya panikkar
- Advertisement -

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಎಲ್ಲೆಡೆ ಆಚರಣೆ ಮಾಡಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ವಿವಿಧ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಉದ್ಯಮಗಳಿಂದ ಉತ್ಪನ್ನಗಳನ್ನು ಖರೀದಿ ಮಾಡಿದ್ದಾರೆ.

ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಉತ್ಪನ್ನಗಳನ್ನು ಖರೀದಿ ಮಾಡಿದ್ದು, ಈ ಕುರಿತ ಮಾಹಿತಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಮಹಿಳಾ ದಿನಾಚರಣೆಗೆ ವಿಶೇಷವಾಗಿ ಶುಭಕೋರಿದ್ದಾರೆ.

ಪ್ರಮುಖವಾಗಿ ತಮಿಳುನಾಡಿನಿಂದ ಶಾಲು, ಅಸ್ಸಾಂನ ಟಾವೆಲ್​​, ಬಂಗಾಳದಿಂದ ಫೈಲ್​ ಫೋಲ್ಡರ್, ಗೊಂಡ್​​​ ಪೇಪರ್ ಪೇಂಟಿಂಗ್, ಖಾದಿ ಶಾಲು, ದೀಪ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಖರೀದಿ ಮಾಡಿದ್ದಾರೆ.

- Advertisement -

Related news

error: Content is protected !!