Monday, April 29, 2024
spot_imgspot_img
spot_imgspot_img

ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಮಹಿಳಾ ವಿಶೇಷ ಗ್ರಾಮ ಸಭೆ

- Advertisement -G L Acharya panikkar
- Advertisement -

ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಇಂದು ದಿನಾಂಕ 06/01/2024 ರಂದು ಮಹಿಳಾ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪುನೀತ್ ಮಾಡತ್ತಾರ್ ವಹಿಸಿ ಮಹಿಳೆ ಅಬಲೆಯಲ್ಲ ಸಬಲೆ ಗ್ರಾಮದ ಮಹಿಳೆಯರು ಇಂದು ಸ್ವಾವಲಂಬನೆ ಜೀವನವನ್ನು ಪ್ರಾರಂಬಿಸಿ ಗ್ರಾಮ ಅಭಿವೃದ್ಧಿ ಕಾರ್ಯದಲ್ಲಿ ಕೈ ಜೊಡಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ನಾಟಿವೈದ್ಯೆಯಾದ ಶ್ರೀಮತಿ ಗಿರಿಜಾ ಡೆಚ್ಚಾರ್ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಡಿನ ಹೂಳೆತ್ತುವ ಕೆಲಸ ನಿರ್ವಹಿಸಿದ ಮಹಿಳಾ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ವಿಟ್ಲ ಆರಕ್ಷಕ ಠಾಣಾ ಉಪ ನಿರೀಕ್ಷಕರಾದ ಶ್ರೀ ಗೋವಿಂದ ದೊಡ್ಡೆಮಣಿ ಬಾಲ್ಯವಿವಾಹ ಕಾಯ್ದೆ, ಕೌಟುಂಬಿಕ ದೌರ್ಜನ್ಯ, ಬಾಲಕಾರ್ಮಿಕತೆ, ಲೈಂಗಿಕ ದೌರ್ಜನ್ಯ ಕಾಯ್ದೆಯ ಅರಿವನ್ನು ಮೂಡಿಸಿದರು.

ಪೋಷಣ ಅಭಿಯಾನ ಸಂಯೋಜಕರಾದ ಶ್ರೀಮತಿ ವಿನೀತಾ ಪೈ ಅವರು ಮಹಿಳೆಯರಿಗೆ ಗ್ರಾಮ ಪಂಚಾಯತಿಯ ವಿವಿಧ ಯೋಜನೆಗಳು , ರಾಜ್ಯ ಹಾಗೂ ಕೇಂದ್ರ ಸರಕಾರದ ಯೊಜನೆಗಳ ಮಾಹಿತಿಯನ್ನು ನೀಡಿದರು,ತಾಲೂಕು ಸಂಯೋಜಕರಾದ ಶ್ರೀ ಅಲ್ಲಾಭಕ್ಷ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಸಭೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಜಯ ಕೆ ಅವರು ನಿರೂಪಣೆ ಮಾಡಿದರು, ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮಹಾಬಲೇಶ್ವರ ಭಟ್ , ಪ್ರೇಮಲತಾ ಪಟ್ಲ, ಚಂದ್ರಾವತಿ , ಅಂಗನವಾಡಿ ಹಿರಿಯ ಮೇಲ್ವಿಚಾರಕಿ ಶ್ರೀಮತಿ ರೂಪಕಲಾ , ಸಮುದಾಯ ಆರೋಗ್ಯ ಕೇಂದ್ರದ ಡಾಕ್ಟರ್ ಸಂಜಯ್, ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆಯರು , ಸಂಜೀವಿನೀ ಒಕ್ಕೂಟದವರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!