Monday, June 15, 2026
spot_imgspot_img
spot_imgspot_img

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾರ್ಮಿಕರು ಜಖಂ..!: ಗುತ್ತಿಗೆದಾರನ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುಣಚ: ಪುಣಚ ಗ್ರಾಮದ ಬರೆಂಜಾ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕಾಮಾಗಾರಿ ವೇಳೆ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಕಡಬದ ನಿವಾಸಿ ರಾಜೇಂದ್ರ ಪ್ರಸಾದ್ ಶೆಟ್ಟಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇತುವೆ ಕಾಮಾಗಾರಿ ಕೆಲಸ ಸದ್ಯಕ್ಕೆ ಸ್ಥಗಿತಗೊಂಡಿದ್ದು, ಕಾಮಾಗಾರಿಗೆ ಬಳಸಿದ ವಸ್ತುಗಳನ್ನು ಸ್ಥಳದಿಂದ ತೆರವುಗೊಳಿಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡ ಆರು ಮಂದಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪುತ್ತೂರು ಆಸ್ಪತ್ರೆಯಲ್ಲಿ ಓರ್ವ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ..

- Advertisement -

Related news

error: Content is protected !!