Saturday, April 20, 2024
spot_imgspot_img
spot_imgspot_img

ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್​!!

- Advertisement -G L Acharya panikkar
- Advertisement -

ಬೆಂಗಳೂರು: ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಒಂದು ವೇಳೆ ನಾಳೆಯೊಳಗೆ ಕೆಲಸಕ್ಕೆ ಹಾಜರಾಗದೇ ಹೋದ್ರೆ ಎಸ್ಮಾ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.

ಎಸ್ಮಾ ಎಂದರೇನು? ಅಗತ್ಯ ಸೇವೆ ನಿರ್ವಹಣೆ ಕಾಯಿದೆ (Essential Services Maintenance Act) (ESMA) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ.

ಯಾವಾಗ ಜಾರಿ ಮಾಡಲಾಗುತ್ತದೆ : ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆಗೆ ಮುಂದಾಗಿ ಪರಿಸ್ಥಿತಿ ಸಂಪೂರ್ಣ ಕೈ ಮೀರಿ ಹೋಗುತ್ತಿದೆ ಎಂಬ ಸಂದರ್ಭದಲ್ಲಿ ಸರ್ಕಾರ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ.

ಎಸ್ಮಾ ಜಾರಿ ಪರಿಣಾಮ ಏನು : ಎಸ್ಮಾ ಎಂದರೆ ‘ಕಡ್ಡಾಯ ಕೆಲಸ’ ಎಂಬ ಅರ್ಥ ಬರುತ್ತದೆ. ಸಂವಿಧಾನ ಅನುಸೂಚಿ 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಸಾಧ್ಯತೆಯೂ ಇರುತ್ತದೆ. ಎಸ್ಮಾ ಜಾರಿಯಾದ ಮೇಲೂ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ.

- Advertisement -

Related news

error: Content is protected !!