Tuesday, April 23, 2024
spot_imgspot_img
spot_imgspot_img

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

- Advertisement -G L Acharya panikkar
- Advertisement -

ಮನಾಲಿ: ಹಿಮಾಚಲ ಪ್ರದೇಶದ ಮನಾಲಿಯಿಂದ ಜಮ್ಮು ಕಾಶ್ಮೀರದ ಲೇಹ್ ಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಿಸಿದರು. ಹಲವು ಪ್ರಾಕೃತಿಕ ಸವಾಲುಗಳ ಮಧ್ಯೆ ಈ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ. ಇದು ಸಮುದ್ರ ಮಟ್ಟದಿಂದ 10000 ಅಡಿ ಎತ್ತರದಲ್ಲಿದೆ.3200 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸುರಂಗ ಮಾರ್ಗ ನಿರ್ಮಿಸಲಾಗಿದೆ.

ದೇಶದ ರಕ್ಷಣೆಯ ದೃಷ್ಟಿಯಿಂದ ಈ ಸುರಂಗ ಮಾರ್ಗ ವ್ಯೂಹಾತ್ಮಕ ಮಹತ್ವ ಪಡೆದುಕೊಂಡಿದೆ. ದೇಶದ ಗಡಿಗೆ ಯೋಧರನ್ನು ಕ್ಷಿಪ್ರ ಅವಧಿಯಲ್ಲಿ ರವಾನಿಸಲು ಇದರಿಂದ ಸಾಧ್ಯವಾಗಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್. ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜೆನರಲ್ ಎಂಎಂ ನರಾವಣೆ, ಹಿಮಾಚಲ ಪ್ರದೇಶದ ಸಿಎಂ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದ ವೇಳೆ ಉಪಸ್ಥಿತರಿದ್ದರು.

- Advertisement -

Related news

error: Content is protected !!