ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ನವದೆಹಲಿ: ಇಡೀ ವಿಶ್ವದಾದ್ಯಂತ ಕೊರೊನಾ ರಣಕೇಕೆ ಹಾಕುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 22,750 ಮಂದಿಗೆ ಕೊರೊನಾ ತಗುಲಿದೆ. ಹೀಗಾಗಿ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,42,417ಕ್ಕೇರಿಕೆಯಾಗಿದೆ. ಇದರಲ್ಲಿ 2,64,944 ಸಕ್ರೀಯ ಪ್ರಕರಣಗಳಿವೆ. ಈವರೆಗೆ 4,56,831 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶ ತಿಳಿಸಿದೆ.
24 ಗಂಟೆಗಳಲ್ಲಿ 482 ಸೋಂಕಿತರ ಸಾವು..!
ಕಳೆದ 24 ಗಂಟೆಗಳಲ್ಲಿ 482 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 20,642ಕ್ಕೇರಿಕೆಯಾಗಿದೆ. ಇನ್ನು ಸೋಮವಾರ 2,62,679 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಮತ್ತೊಂದುಕಡೆ ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ 2,17,121 ಆಗಿದೆ. ಸಾವಿನ ಸಂಖ್ಯೆ 9,250 ಆಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 89,313 ಇದೆ ಎಂದು ತಿಳಿಸಿದೆ. ಇನ್ನು ತಮಿಳುನಾಡಿನಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,18,594. ಇಲ್ಲಿಯವರೆಗೆ 1,636 ಮಂದಿ ಬಲಿಯಾಗಿದ್ದಾರೆ.