Friday, May 3, 2024
spot_imgspot_img
spot_imgspot_img

ವಿಶ್ವವಿಖ್ಯಾತ ‘ಮಂಗಳೂರು ದಸರಾ’

- Advertisement -G L Acharya panikkar
- Advertisement -

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ ‘ಮಂಗಳೂರು ದಸರಾ’ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಅ. 15ರಿಂದ 25ರವರೆಗೆ ನಡೆಯಲಿದೆ.

ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರು ಪತ್ರಿಕಾಗೋಷ್ಢಿಯಲ್ಲಿ ಮಾಹಿತಿ ನೀಡಿ ಅಕ್ಟೋಬರ್‌ 15ರಂದು ಶ್ರೀ ಗಣೇಶ, ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭವಾಗಲಿದೆ. ಪ್ರತೀ ದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಅಕ್ಟೋಬರ್ 24ರಂದು ಸಂಜೆ 4 ಗಂಟೆಗೆ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದರು.

ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರು ಮಾತನಾಡಿ ಎಲ್ಲರನ್ನು ಒಟ್ಟುಗೂಡಿಸಿ ಸಾಮರಸ್ಯದಿಂದ ಮಂಗಳೂರು ದಸರಾ ಆಚರಿಸಲಾಗುವುದು. ಈ ವರ್ಷ ಕ್ರೈಸ್ತರು ಸ್ತಬ್ದ ಚಿತ್ರ ಪ್ರದರ್ಶಿಸಲಿದ್ದಾರೆ. ಅ. 20ರಂದು ಸಾಮೂಹಿಕ ಚಂಡಿಕಾ ಹೋಮ, 23ರಂದು ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ವಿಶೇಷ ಕಾರ್ಯಕ್ರಮವಾಗಿ ಖ್ಯಾತ ಫಿಟ್‌ನೆಸ್‌ ಕ್ಲಬ್‌ ಸಹಾಯದಿಂದ ಕ್ಷೇತ್ರದ ವತಿಯಿಂದ ಅ.14ರಂದು ಮಾರಥಾನ್‌ ನಡೆಸುವ ಉದ್ದೇಶವಿದೆ. ಹಾಗೆಯೇ ದಸರಾ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿಯ ರಾಜ್ಯ ಮಟ್ಟದ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಮುಖ್ಯಮಂತ್ರಿ ಮತ್ತು ಉಪ ಮುಖ್ಯ ಮಂತ್ರಿ, ರಾಜ್ಯ ಮತ್ತು ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದಸರಾ ಮೆರವಣಿಗೆ ಬಗ್ಗೆ ಹರಿಕೃಷ್ಣ ಬಂಟ್ವಾಳ್‌ ಮಾಹಿತಿ ನೀಡಿ 60 ಕ್ಕೂ ಹೆಚ್ಚು ಸ್ತಬ್ದ ಚಿತ್ರಗಳು ಭಾಗವಹಿಸಲಿವೆ ಎಂದರು. ಅ. 15ರಿಂದ 23ರವರೆಗೆ ದಿನಂಪ್ರತಿ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಪ್ರಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿವೆ ಎಂದರು. ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್‌ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ.

ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್, ಲೀಲಾಕ್ಷ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!