ಕುಸ್ತಿಪಟುಗಳು ಕಳೆದೊಂದು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಪದಕಗಳನ್ನು ನಾವು ಗಂಗಾ ನದಿಗೆ ಎಸೆಯುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಇಂದು ಸಂಜೆ (ಮೇ 30) 6 ಗಂಟೆಗೆ ಹರಿದ್ವಾರದ ಗಂಗಾ ನದಿಯಲ್ಲಿ ಪದಕಗಳನ್ನು ಎಸೆದು, ನಂತರ ನವದೆಹಲಿಯ ಇಂಡಿಯಾ ಗೇಟ್ ಎದುರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
https://twitter.com/BajrangPunia/status/1663440220174561280?s=20
ಇನ್ನು ಕಳೆದೊಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ನೂತನ ಸಂಸತ್ ಭವನ ಉದ್ಘಾಟನಾ ವೇಳೆಯಲ್ಲಿ ನೂತನ ಸಂಸತ್ ಭವನದ ಕಡೆಗೆ ತೆರಳುತ್ತಿದ್ದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದ ನಂತರ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಸೇರಿದಂತೆ 109 ಪ್ರತಿಭಟನಾಕಾರರನ್ನು ಜಂತರ್ ಮಂತರ್‌ನಲ್ಲಿ ಬಂಧಿಸಲಾಯಿತು. ಮಹಿಳಾ ಬಂಧಿತರನ್ನು ಭಾನುವಾರ ಸಂಜೆ ನಂತರ ಬಿಡುಗಡೆ ಮಾಡಲಾಯಿತು.
ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಜಂಟಿ ಹೇಳಿಕೆಯನ್ನು ನೀಡಿದ್ದಾರೆ. ʼಈ ಪದಕಗಳು ನಮ್ಮ ಜೀವನ, ನಮ್ಮ ಆತ್ಮ. ಇವುಗಳನ್ನು ನಾವು ಗಂಗಾನದಿಯಲ್ಲಿ ಎಸೆಯಲು ತೀರ್ಮಾನ ಮಾಡಿದ್ದೇವೆ. ಗಂಗಾ ನದಿಯಲ್ಲಿ ಎಸೆದ ಮೇಲೆ ಅವುಗಳಿಗೆ ಜೀವ ಇರುವುದಿಲ್ಲ. ಅದನ್ನು ಎಸೆದು ನಂತರ ನಾನು ಇಂಡಿಯಾ ಗೇಟ್‌ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆʼ ಎಂದು ಹೇಳಿದ್ದಾರೆ.