Saturday, July 25, 2026
spot_imgspot_img
spot_imgspot_img

ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಶೇ.12.50ರಷ್ಟು ಹೆಚ್ಚಳ : ಸರಕಾರ ಆದೇಶ

- Advertisement -
- Advertisement -

ಬೆಂಗಳೂರು, ಮೇ 12: ರಾಜ್ಯ ಸರಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಪೂರ್ವ ಕಿಂಕೋ ಅಧಿಕಾರಿ, ನೌಕರರ ವೇತನವನ್ನು ಶೇ.12.50ರಷ್ಟು ಹೆಚ್ಚಿಸಲು ಆದೇಶ ಹೊರಡಿಸಿದೆ.2025ನೆ ಸಾಲಿನ ಮಾ.31ರಂದು ಪಡೆಯುತ್ತಿದ್ದ ಮೂಲ ವೇತನವನ್ನು ಶೇ.12.50ರಷ್ಟು ಹೆಚ್ಚಿಸಿ, ಉನ್ನತ ವೇತನ ಶ್ರೇಣಿ ಹಾಗೂ ಮಧ್ಯಂತರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲಾಗುವುದು.

ಈ ಪರಿಷ್ಕರಣೆ 2025ರ ಎ.1ರಿಂದ ಜಾರಿಯಾಗಲಿದ್ದು, 2026ರ ಜು.1ರ ವೇತನದಲ್ಲಿ ಅನುಷ್ಠಾಗೊಳ್ಳಲಿದೆ.ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು 2025ರ ಎ.1ರಿಂದ 2026ರ ಜೂ.30ರ ಅವಧಿಗೆ ಸಂಬಂಧಿಸಿದಂತೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಂತ ಹಂತವಾಗಿ ಪಾವತಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!