Wednesday, July 22, 2026
spot_imgspot_img
spot_imgspot_img

ನಾಳೆ(ಮೇ 10) ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

- Advertisement -
- Advertisement -

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ(ಮೇ 10) ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಮಂತ್ರಿ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಆರ್ಟ್‌ ಆಫ್ ಲಿವಿಂಗ್‌ ಅಂತ‌ರ್ ರಾಷ್ಟ್ರೀಯ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಧ್ಯಾನ ಮಂದಿರವನ್ನು ಉದ್ಘಾಟಿಸಲಿರುವ ನರೇಂದ್ರ ಮೋದಿ, ಮಾನಸಿಕ ಯೋಗಕ್ಷೇಮ, ಗ್ರಾಮೀಣಾಭಿವೃದ್ಧಿ, ಪ್ರಕೃತಿ ಸಂರಕ್ಷಣೆ ಮತ್ತು ಸಾಮಾಜಿಕ ಪರಿವರ್ತನೆಯ ಮೇಲೆ ಕೇಂದ್ರೀಕರಿಸಿದ ವರ್ಷವೀಡಿ ನಡೆಯುವ ಗ್ರಾಮೀಣಾಭಿವೃದ್ಧಿ ಪ್ರಕೃತಿ ಸಂರಕ್ಷಣೆ ಮತ್ತು ಸಾಮಾಜಿಕ ಪರಿವರ್ತನೆಯ ಮೇಲೆ ಕೇಂದ್ರೀಕರಿಸಿದ ವರ್ಷವೀಡಿ ನಡೆಯುವ ಕಾರ್ಯಕ್ರಮಗಳನ್ನು ಒಳಗೊಂಡ ಆರ್ಟ್ ಆಫ್ ಲಿವಿಂಗ್‌ನ ರಾಷ್ಟ್ರವ್ಯಾಪಿ ಸೇವಾ ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.

ಆನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ 9,400 ಕೋಟಿ ರೂ.ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

- Advertisement -

Related news

error: Content is protected !!