Tuesday, July 21, 2026
spot_imgspot_img
spot_imgspot_img

ರಾಜ್ಯ ಸರಕಾರಿ ನೌಕರರ ತುಟ್ಟಿಭತ್ತೆ ಹೆಚ್ಚಳ-ಪ್ರಸಕ್ತ ಮೂಲ ವೇತನದ ಶೇ.14.25 ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಸರಕಾರ ಆದೇಶ

- Advertisement -
- Advertisement -

ಬೆಂಗಳೂರು, ಮೇ 11: ರಾಜ್ಯ ಸರಕಾರಿ ನೌಕರರ ತುಟ್ಟಿಭತ್ತೆ ದರಗಳನ್ನು ಪ್ರಸಕ್ತ ಮೂಲ ವೇತನದ ಶೇ.14.25 ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರಿಗೆ ಪ್ರಸಕ್ತ ಸಾಲಿನ ಜ.1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ತೆಯನ್ನು ಹೆಚ್ಚಳ ಮಾಡಲಾಗಿದೆ.

ರಾಜ್ಯ ಸರಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಪ್ರಸಕ್ತ ಸಾಲಿನ ಜ.1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ತೆ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇ.14.25 ರಿಂದ ಶೇ.15.75ಕ್ಕೆ ಹೆಚ್ಚಿಸಲಾಗಿದೆ.ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ, ಸರಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.ಯುಜಿಸಿ, ಎಐಸಿಇಟಿ, ಐಸಿಎರ್ಆ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!