Tuesday, July 21, 2026
spot_imgspot_img
spot_imgspot_img

ಯಾದಗಿರಿ: ಬೈದದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ದೂರು ದಾಖಲು

- Advertisement -
- Advertisement -

ಯಾದಗಿರಿ: ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಮೃತ ಬಾಲಕ. 9ನೇ ತರಗತಿಯಲ್ಲಿ ಓದುತ್ತಿದ್ದ ಎನ್ನಲಾಗಿದೆ.

ಶಿಕ್ಷಕರು ಬೈದಿದ್ದಕ್ಕೆ ಮನನೊಂದು ಜ.21ರಂದು ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಬಳಿಕ ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಪವನ್ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿ 6 ಜನ ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿರುವ ಪೊಲೀಸರು ನಿಜವಾಗಿ ಶಿಕ್ಷಕರು ಬೈದಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡನಾ? ಅಥವಾ ಬೇರೆ ಏನಾದರೂ ಕಾರಣ ಇದ್ಯಾ ಎಂದು ಪತ್ತೆಹಚ್ಚಲಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!