- Advertisement -
- Advertisement -



ಯಾದಗಿರಿ: ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಹಂಪಣ್ಣ (76) ಕೊಲೆಯಾದ ದುರ್ದೈವಿ. ವೃದ್ಧ ಜಮೀನಿನಲ್ಲಿ ಪುಟ್ಟ ಮನೆಯೊಂದನ್ನು ನಿರ್ಮಿಸಿಕೊಂಡು ಒಬ್ಬಂಟಿಯಾಗಿ ವಾಸವಿದ್ದರು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಹಂಪಣ್ಣ ಪರ ಸ್ತ್ರೀಯರ ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎಂಬ ಮಾಹಿತಿ ಗ್ರಾಮಸ್ಥರಿಂದ ಲಭ್ಯವಾಗಿದೆ. ಇದೇ ಕಾರಣಕ್ಕೆ ದ್ವೇಷ ಸಾಧಿಸಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಸೆರೆಹಿಡಿಯಲು ಬಲೆ ಬೀಸಿದ್ದಾರೆ.
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಕಿಡಿಗೆಡಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಹಾಲು ಪಡೆಯಲು ಬಾರದೇ ಇದ್ದಾಗ ಗ್ರಾಮಸ್ಥರು ಜಮೀನಿಗೆ ಹೋದಾಗ ಕೊಲೆಯಾಗಿರುವುದು ಗೊತ್ತಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








