Tuesday, July 21, 2026
spot_imgspot_img
spot_imgspot_img

ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು

- Advertisement -
- Advertisement -

ಯಾದಗಿರಿ: ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.

ಸೋಮವಾರ ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ ಅಡುಗೆ ಮನೆಯ ಗೋಡೆ ಕುಸಿದು ಅಕ್ಷತಾ (8) ಮೃತಪಟ್ಟಿದ್ದಾಳೆ. ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆ ಗೋಡೆ ಕುಸಿದಿದೆ. ಈ ವೇಳೆ ಬಾಲಕಿ ಅಕ್ಷತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಯೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಪಂ ಸಿಇಓ ಲವೀಶ್ ಒರಡಿಯಾ, ಎಸ್ಪಿ ಪೃಥ್ವಿಕ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!