Friday, July 4, 2025
spot_imgspot_img
spot_imgspot_img

ಕೆಐಎಡಿಬಿ ಡಿನೋಟಿಫಿಕೇಶ್‌ ಪ್ರಕರಣ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮತ್ತೆ ಸಂಕಷ್ಟ

- Advertisement -
- Advertisement -

ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಶ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಮಣ್ಯಂ ನಾಯ್ಡು ರವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಕೇಸ್‌ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್‌ ಆದೇಶವನ್ನ ಹೈಕೋರ್ಟ್‌ ರದ್ದುಗೊಳಿಸಿದೆ.

ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್‌ ಆಧರಿಸಿದ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್‌ ಆದೇಶ ನೀಡಿದೆ.

ಹೂವಿನಾಯಕಹಳ್ಳಿಯಲ್ಲಿನ ಕೆಐಎಡಿಬಿ 20 ಎಕರೆ ಜಮೀನನ್ನ ಅಕ್ರಮವಾಗಿ ಡಿನೋಟಿಫಿಕೇಷನ್‌ ಮಾಡಿಸಿಕೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಕೈಗೊಳ್ಳಿ ಎಂದು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಹೈಕೋರ್ಟ್‌ ಸೂಚನೆ ನೀಡಿದೆ. ಹೈಕೋರ್ಟ್‌ ನ್ಯಾಯಾಧೀಶ ಜಾನ್‌ ಮೈಕೆಲ್‌ ಕುನ್ಹಾರವರಿದ್ದ ನ್ಯಾಯ ಪೀಠ ಈ ಆದೇಶ ನೀಡಿದೆ.

- Advertisement -

Related news

error: Content is protected !!