Sunday, June 7, 2026
spot_imgspot_img
spot_imgspot_img

ಸುಳ್ಯ : ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು

- Advertisement -
- Advertisement -

ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಎಂದು ಗುರುತಿಸಲಾಗಿದೆ.

ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಅವರು ಮುಂಜಾನೆ ವೇಳೆ ತುಂಬಾ ಹೊತ್ತು ಮನೆಯಲ್ಲಿ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರಿಗೆ ಇಬ್ಬರು ಪುತ್ರಿಯರಿದ್ದು,ಇಬ್ಬರಿಗೂ ಮದುವೆಯಾಗಿತ್ತು. ಇವರ ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!