Friday, April 19, 2024
spot_imgspot_img
spot_imgspot_img

ಯಲಹಂಕ ವೀರ ಸಾವರ್ಕರ್ ಮೇಲ್ಸೇತುವೆ ಉದ್ಘಾಟನೆ.

- Advertisement -G L Acharya panikkar
- Advertisement -

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 

 

388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಎಸ್‍ಆರ್ ವಿಶ್ವನಾಥ್, ಸಚಿವರಾದ ಸಿಟಿ ರವಿ, ಡಿಸಿಎಂ ಅಶ್ವಥ್ ನಾರಾಣ್, ಗೃಹ ಸಚಿವ ಬಸವರಾಜ್ ಬೊಮ್ಮಯಿ ಮತ್ತು ಬೈರತಿ ಬಸವರಾಜು ಉಪಸ್ಥಿತರಿದ್ದರು.

- Advertisement -

Related news

error: Content is protected !!