Saturday, May 18, 2024
spot_imgspot_img
spot_imgspot_img

ವರ್ಷದ ಅಂತರದಲ್ಲೇ ಮತ್ತೊಂದು ವೈಮಾನಿಕ ದುರಂತ; 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನ; ೪೦ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ

- Advertisement -G L Acharya panikkar
- Advertisement -

ಕಠ್ಮಂಡು: 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡು ೮ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ನೇಪಾಳದ ಪೋಖರಾ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ. ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. 40 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ಒಟ್ಟು 10 ವಿದೇಶಿ ಪ್ರಯಾಣಿಕರು ಸೇರಿದಂತೆ 68 ಮಂದಿ ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎನ್ನಲಾಗಿದೆ.

ಯೇತಿ ಏರ್‌ಲೈನ್ಸ್‌ 9N-ANC ATR-72 ವಿಮಾನವು ಕಠ್ಮಂಡು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 10.33ಕ್ಕೆ ಹೊರಟಿತ್ತು. ಪೋಖರಾದಲ್ಲಿ ಲ್ಯಾಂಡಿಂಗ್‌ ವೇಳೆ ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಿನ ಸೇತಿ ನದಿ ದಂಡೆ ಮೇಲೆ ವಿಮಾನ ಪತನಗೊಂಡಿದೆ. ಇದು ಹಳೆಯ ವಿಮಾನ ನಿಲ್ದಾಣ ಮತ್ತು ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡುವಿನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ತಿ ವಿಮಾನ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಸಕಿ ಜಿಲ್ಲಾಧಿಕಾರಿ ಟೆಕ್‌ ಬಹಾದ್ದೂರ್‌ ಸ್ಥಳೀಯ ಮಾಧ್ಯಮಗಳಿಗೆ ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಲ್ಲೂ ನಡೆದಿತ್ತು ದುರಂತ..!
2022 ರ ಮೇ ತಿಂಗಳಿನಲ್ಲಿ ತಾರಾ ಏರ್‌ ಸಂಸ್ಥೆಯ ಸಣ್ಣ ಅವಳಿ ಎಂಜಿನ್ ವಿಮಾನವು ನೇಪಾಳದ ಪೋಖರಾನ್‌ ನಿಂದ ಟೇಕಾಫ್ ಆದ ನಂತರ ನಾಪತ್ತೆಯಾಗಿತ್ತು. 4 ಮಂದಿ ಭಾರತೀಯರು ಸೇರಿದಂತೆ 22 ಮಂದಿ ಇದ್ದ ವಿಮಾನ ಪತನಗೊಂಡಿದೆ. ನಿರಂತರ ಹುಡುಕಾಟದ ನಂತರ ರಕ್ಷಣಾ ಪಡೆಗಳು ವಿಮಾನ ಅಪಘಾತದ ಸ್ಥಳವನ್ನು ಪತ್ತೆಹಚ್ಚಿದ್ದವು. ಮುಸ್ತಾಂಗ್‌ ನಲ್ಲಿ ವಿಮಾನ ಅಪಘಾತವಾಗಿ ವಿಮಾನದಲ್ಲಿದ್ದ ಎಲ್ಲಾ 22 ಜನರು ಸಾವನ್ನಪ್ಪಿದ್ದರು.

- Advertisement -

Related news

error: Content is protected !!