Thursday, June 18, 2026
spot_imgspot_img
spot_imgspot_img

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಯೋಗ ಗುರು ಅರೆಸ್ಟ್‌

- Advertisement -
- Advertisement -

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು ನಡೆಸುತ್ತಿದ್ದ. ಈ ಯೋಗ ಸೆಂಟರ್‌ಗೆ ಓರ್ವ ಅಪ್ರಾಪ್ತ ಬಾಲಕಿ ಬರುತ್ತಿದ್ದಳು. ಯೋಗದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಕರೆದೊಯ್ದು, ನಿನ್ನ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿನಗೆ ಸರ್ಕಾರಿ ಕೆಲಸವೂ ಸಿಗಬಹುದು ಎಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

- Advertisement -

Related news

error: Content is protected !!