Wednesday, July 22, 2026
spot_imgspot_img
spot_imgspot_img

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದು, 2016ರ ಜೂನ್ 15ರಂದು ಧಾರವಾಡದ ಜಿಮ್ ಒಂದರಲ್ಲಿ ಯೋಗೀಶ್ ಗೌಡ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿತ್ತು.

15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿ ಗುರುವಾರ ಕೋರ್ಟ್ ತೀರ್ಪು ನೀಡಿತ್ತು. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟಿಸಿರುವ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ ಮಕ್ಕಳಿಗೆ 16 ಲಕ್ಷ ರೂ. ಹಣವನ್ನು ಪರಿಹಾರವಾಗಿ ನೀಡಲು ಸೂಚಿಸಿದೆ.

ಈ ತೀರ್ಪಿನ ಮೂಲಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದ್ದು, ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಲಾಗಿದೆ. ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿ ಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!