Thursday, December 5, 2024
spot_imgspot_img
spot_imgspot_img

ಆಗಸ್ಟ್ 2ರಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ

- Advertisement -
- Advertisement -

ಲಕ್ನೋ: ಆಗಸ್ಟ್ 2ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಿಎಂ ಆಗಸ್ಟ್ 2ರಂದು ಅಯೋಧ್ಯೆಗೆ ಭೇಟಿ ನೀಡಿ, ಅಲ್ಲಿನ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರದ ಸಚಿವರು ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಭಾಗವಹಿಸುವ ಸಾಧ್ಯತೆ ಇದೆ.

- Advertisement -

Related news

error: Content is protected !!