Wednesday, April 2, 2025
spot_imgspot_img
spot_imgspot_img

ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ನೇಮಕ

- Advertisement -
- Advertisement -

ನವದೆಹಲಿ: ಯುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿಯನ್ನು ಅನುಮೋದಿಸಿದೆ.

ವಾರಣಾಸಿಯ ಮೆಹಮುರ್ಗಂಜ್ ಮೂಲದ ನಿಧಿ ತಿವಾರಿ 2013 ರ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದರು. ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರಧಾನಿ ಮೋದಿ 2014ರಿಂದ ಪ್ರತಿನಿಧಿಸುತ್ತಿದ್ದಾರೆ.

2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಬಿಮಲ್ ಸನ್ಯಾಲ್ ಸ್ಮಾರಕ ಪದಕವನ್ನು ನೀಡಿ ಪುರಸ್ಕರಿಸಲಾಗಿತ್ತು. ತಿವಾರಿ ಅವರು ಜನವರಿ 6, 2023 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 2022ರಲ್ಲಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇರ್ಪಡೆಯಾದರು.

ಈ ಹಿಂದೆ ವಿದೇಶಾಂಗ ಸಚಿವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು. ತಿವಾರಿ ಅವರು ಪ್ರಧಾನಿ ಸಚಿವಾಲಯದಲ್ಲಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ.

2013ರಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೊದಲು ಅವರು ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ (ವಾಣಿಜ್ಯ ತೆರಿಗೆ) ಕೆಲಸ ಮಾಡುತ್ತಿದ್ದರು. ತಮ್ಮ ಕೆಲಸದೊಂದಿಗೆ ತಯಾರಿ ನಡೆಸಿ ಪರೀಕ್ಷೆಯನ್ನು ತೇರ್ಗಡೆಯಾಗಿದ್ದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ವರದಿ ಮಾಡುವ ‘ವಿದೇಶಾಂಗ ಮತ್ತು ಭದ್ರತೆ’ ವಿಭಾಗದಲ್ಲಿ ಉಪ ಕಾರ್ಯದರ್ಶಿಯಾಗಿ ನಿಧಿ ತಿವಾರಿ ಕೆಲಸ ಮಾಡಿದ್ದಾರೆ.

- Advertisement -

Related news

error: Content is protected !!