Wednesday, August 12, 2026
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ..!

- Advertisement -
- Advertisement -

ಗ್ರಾಮದ ಮಧ್ಯದಲ್ಲೇ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕ ಗಜೇಂದ್ರ (28) ಎಂದು ಗುರುತಿಸಲಾಗಿದೆ.

ಈತ ವೃತ್ತಿಯಲ್ಲಿ ಚಾಲಕನಾಗಿದ್ದ ಎಂದು ತಿಳಿದು ಬಂದಿದೆ. ಗ್ರಾಮದ ಎಂಎಸ್‌ಐಎಲ್ ಮದ್ಯದಂಗಡಿ ಬಳಿ ಯುವಕರ ನಡುವೆ ಗಲಾಟೆ ನಡೆದಿದೆ, ಆದರೆ ಯಾವ ವಿಚಾರಕ್ಕೆ ಗಲಾಟೆ ನಡೆದಿದೆ ಎಂದು ತಿಳಿದು ಬಂದಿಲ್ಲ. ನಡುರಸ್ತೆಯಲ್ಲಿ ಗಜೇಂದ್ರ ರಕ್ತಸಿಕ್ತವಾಗಿ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಎಂದಿನಂತೆ ಜನ ಎದ್ದು ಬಂದಾಗ ನಡುರಸ್ತೆಯಲ್ಲಿ ಮೃತದೇಹ ಕಂಡು ಬೆಚ್ಚಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈಬಗ್ಗೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!