Sunday, May 19, 2024
spot_imgspot_img
spot_imgspot_img

ಬೆಳ್ತಂಗಡಿ : ಯುವತಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಳ್ತಂಗಡಿ : ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ.
ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ.

ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು ಅನಾರೋಗ್ಯ ಸಮಸ್ಯೆ ಕಾಡಿದ ಹಿನ್ನಲೆಯಲ್ಲಿ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. ಫೆ. 8 ರಂದು ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಡೆತ್ ನೋಟ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!