- Advertisement -
- Advertisement -





ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.
ಮೃತಪಟ್ಟ ಯುವತಿ ಮೆಹನಾಜ್ (17) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್ ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಈಜು ಬಾರದೆ ಇದ್ದರೂ, ನೀರಿನಲ್ಲಿ ಆಟವಾಡುಲು ನದಿಗೆ ಇಳಿದಿದ್ದಾಳೆ. ಆದರೆ ನೀರಿನ ಸೆಳತಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ.
ವಿಷಯ ತಿಳಿಯುತ್ತಿದ್ದಂತತರ ಘಟನಾ ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯ ಬಗ್ಗೆ ತಲಕಾಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -