Tuesday, October 6, 2026
spot_imgspot_img
spot_imgspot_img

ದೇವರ ಕೋಣೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ – ಯುವಕನ ಬಂಧನ

- Advertisement -
- Advertisement -

ಗದಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.

ಬಸವರಾಜ ಹರಣಶಿಕಾರಿ(22) ಬಂಧಿತ ಆರೋಪಿ. ಮನೆಯಲ್ಲೇ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ ವೇಳೆ ಮನೆಯ ದೇವರ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 2 ಕೆಜಿ 91 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಪ್ತಿ ಮಾಡಲಾದ ಗಾಂಜಾದ ಮೌಲ್ಯ ಸುಮಾರು 1 ಲಕ್ಷ 4,550 ರೂಪಾಯಿ ಎಂದು ತಿಳಿದುಬಂದಿದೆ.

ಆರೋಪಿಯ ವಿಚಾರಣೆ ವೇಳೆ ಮಹಾರಾಷ್ಟ್ರದಿಂದ ಗಾಂಜಾವನ್ನು ತಂದು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಗಾಂಜಾ ದಂಧೆಯ ಹಿಂದೆ ಇರುವ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!