Friday, July 11, 2025
spot_imgspot_img
spot_imgspot_img

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಆಯ್ಕೆ..!

- Advertisement -
- Advertisement -

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ.

ಮಾಜಿ ಸಚಿವ ಎಂ.ಆರ್. ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡನೇ ಅತೀ ಹೆಚ್ಚಿನ ಮತ ಗಳಿಸಿದ ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 7 ಮಂದಿ ನಾಮಪತ್ರ ಸಲ್ಲಿಸಿದ್ದರು. ಮಿಥುನ್ ರೈ ಕಣದಿಂದ ಹಿಂದೆ ಸರಿದಿದ್ದರಿಂದ ಆರು ಜನರು ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದರು. ಇವರಲ್ಲಿ ಶಾಂತಿನಗರ ಶಾಸಕ ಎನ್.ಎ.ಹಾರಿಸ್ ಪುತ್ರ ಮುಹಮ್ಮದ್ ನಲಪ್ಪಾಡ್, ಎಚ್.ಎಸ್. ಮಂಜುನಾಥ್ ಹಾಗೂ ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಇದೀಗ ರಕ್ಷಾ ರಾಮಯ್ಯ 56,271 ಮತಗಳು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಚ್.ಎಸ್. ಮಂಜುನಾಥ್‍ಗೆ 18,137 ಮತಗಳು ಬಿದ್ದರೆ, ಮುಹಮ್ಮದ್ ನಲಪಾಡ್ ಫಲಿತಾಂಶವನ್ನೇ ತಡೆ ಹಿಡಿಯಲಾಗಿದೆ. ನಲಪಾಡ್ ರವರು ರಕ್ಷಾ ರಾಮಯ್ಯ ರವರಿಗಿಂತ ಹೆಚ್ಚಿನ (64203) ಮತಗಳನ್ನು ಪಡೆದಿದ್ದರೂ ರಕ್ಷಾ ರಾಮಯ್ಯ ರವರು ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!